ಪುತ್ತೂರು: ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತೆಲ್ ನಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.3 ರಿಂದ 7 ರವರೆಗೆ ನಡೆಯಲಿದೆ.
ಮೂಡಬಿದ್ರೆ ಶಿವಾನಂದ ಶಾಂತಿಯವರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಮಾ.3 ರಿಂದ 7 ರವರೆಗೆ ವಿವಿಧ ಗಣ್ಯರ ಸಮ್ಮಿಲನದಲ್ಲಿ ಧಾರ್ಮಿಕ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆಯೊಂದಿಗೆ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.