ಮಂಗಳೂರು: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ಆರು ಮಂದಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.
ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದವರು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿದ್ದರು. ಏಕಾಏಕಿ ವ್ಹೀಲ್ ಜಾಯಿಂಟ್ ತಪ್ಪಿದ ಪರಿಣಾಮ ಬಿದ್ದು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಉಮ್ಮರ್ ಫಾರೂಕ್ (42), ಮೊಹಮ್ಮದ್ ಆಯೂಬ್ (7) ಮಶಿಥಾ (18) ನೂರ್ ಜಹಾನ್ (36) ಸಲೇಕಾ (28) ಮತ್ತು ಸಮೀರ್( 41) ಎಂದು ಗುರುತಿಸಲಾಗಿದೆ.
ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.