ಉಡುಪಿ: ಬೆಂಕಿ ತಗಲಿ ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿಯೇ ಸುಟ್ಟು ಕರಕಲಾದ ಘಟನೆ ಮಣಿಪಾಲದ ಟೈಗರ್ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ.
ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದು, ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಘಟನೆ ಸಂಭವಿಸಿದೆ.
ಪ್ರಾರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಲಾಯಿತು. ಬಸ್ಸು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ಚಾಲಕ, ನಿರ್ವಾಹಕ, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.