ಉಳ್ಳಾಲ: ಯುವತಿಯೋರ್ವಳು ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ನೇಣುಬಿಗಿದು ಸಾವನ್ನಪ್ಪಿರುವ ಯುವತಿಯನ್ನು ಕುಂಪಲ ಬಲ್ಯ ನಿವಾಸಿ ಹರ್ಷಿತಾ(21ಎನ್ನಲಾಗಿದೆ.
ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ.
ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣುಹಾಕಿಕೊಂಡಿದ್ದು, ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯ ನಿವಾಸಿ ಪ್ರಿಯಕರ ಆಕೆಯನ್ನು ನೇಣಿನ ಕುಣಿಕೆಯಿಂದ ಕೆಳಗಿಳಿಸಿ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಹರ್ಷಿತಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.