ವಿಟ್ಲ: ಗುಡ್ಡಕ್ಕೆ ಬೆಂಕಿ ಬಿದ್ದು, ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಅನಿಲಕಟ್ಟೆಯಲ್ಲಿ ನಡೆದಿದೆ.

ಅನಿಲಕಟ್ಟೆಯ ರಕ್ಷಿತಾರಣ್ಯದ ಬಳಿಯ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ವಿಷಯ ತಿಳಿದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ತಿಳಿಸಿದ್ದು, ತಕ್ಷಣ ಸ್ಥಳಾಕ್ಕಾಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಭೇಟಿ ನೀಡಿದರು.


