ವಿಟ್ಲ: ಸಿಟಿ ಲಯನ್ಸ್ ಕ್ಲಬ್ ನ ಸದಸ್ಯರಾದ ದಿನಕರ್ ಆಳ್ವ ರವರ ಮನೆಗೆ ಮಾಜಿ ಸಚಿವ ರಮಾನಾಥ್ ರೈ ರವರು ಭೇಟಿ ನೀಡಿದರು.
ದಿನಕರ್ ಆಳ್ವ ರವರ ತಾಯಿ ಪುಷ್ಪ ರವರು ಇತ್ತೀಚಿಗೆ ನಿಧನರಾಗಿದ್ದು, ಈ ನಿಟ್ಟಿನಲ್ಲಿ ಅವರ ಮನೆಗೆ ಭೇಟಿ ನೀಡಿದ ರಮಾನಾಥ್ ರೈ ರವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಹೇಮನಾಥ ಶೆಟ್ಟಿ, ಪ್ರಾಂತೀಯ ಸಲಹೆಗಾರ ಸುದರ್ಶನ್ ಪಡಿಯಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತ ಹೇಮನಾಥ್ ಶೆಟ್ಟಿ ಹಾಗೂ ಲಯನ್ ಗಣೇಶ್ ಶೆಟ್ಟಿ, ಬಿ. ಆರ್. ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಎಂ. ಎಸ್. ಮಹಮ್ಮದ್ ಹಾಗೂ ದಿನಕರ್ ಆಳ್ವ ರವರ ಕುಟುಂಬಿಕರು ಉಪಸ್ಥಿತರಿದ್ದರು.