ಮಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಜಾಗತಿಕ ಆತಂಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಉಕ್ರೇನ್‌ನಲ್ಲಿ ನೆಲೆಸಿರುವ ನಮ್ಮವರನ್ನು ರಕ್ಷಿಸುವಲ್ಲಿ ಮೊದಲು ಆದ್ಯತೆ ನೀಡಬೇಕಾಗಿದೆ.
ಆದ್ದರಿಂದ ಉಕ್ರೇನ್ ನಲ್ಲಿ ಜಿಲ್ಲೆಯ ಜನರು ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ ಇದ್ದರೆ ತಕ್ಷಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ವಿಜ್ಞಾಪಿಸಿಕೊಂಡಿದೆ.
ಈ ಬಗ್ಗೆ ಯಾರಾದರೂ ನಮ್ಮವರು ಅಲ್ಲಿ ಸಮಸ್ಯೆಗೆ ಸಿಲುಕಿದ್ದರೆ ಮಾಹಿತಿ ನೀಡಿ, ಅಲ್ಲಿ ಇರುವವರು ಹಾಗೂ ಅಲ್ಲಿ ಸಿಲುಕಿಕೊಂಡಿರುವ ಜಿಲ್ಲೆಯ ಕುಟುಂಬಸ್ಥರು ನೇರವಾಗಿ ಜಿಲ್ಲಾಡಳಿತವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿಕೊಂಡಿದ್ದಾರೆ.
ಈಗಾಗಲೇ ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದ್ದರಿಂದ ಭಯದ ವಾತಾವರಣ ಸೃಷ್ಠಿಯಾಗಿದೆ. ಈ ನಿಟ್ಟಿನಲ್ಲಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತ ಸರ್ಕಾರ ಸಹಾಯವಾಣಿ ಆರಂಭಿಸಿದೆ.
ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರು ಭಾರತದ ದೂತಾವಾಸ ಮತ್ತು ಸರ್ಕಾರದ ಜೊತೆ ಸಂಪರ್ಕದಲ್ಲಿರಲು ವಿದೇಶಾಂಗ ಇಲಾಖೆಯ 1800118797 (Toll free), +91-11-23012113, +91-11-23014104, +91-11-23017905 ಸಂಪರ್ಕ ಸಂಖ್ಯೆಗೆ ಕರೆ ಮಾಡಬಹುದು. ಅಲ್ಲದೇ Fax: +91-11-23088124, Email: situationroom@mea.gov.in ಮೂಲಕವೂ ಮಾಹಿತಿ ನೀಡಲು ಸರ್ಕಾರ ಸೂಚಿಸಿದೆ.