ಮಂಗಳೂರು: ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ರವರ 73 ನೇ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗಿಯಾದ ಪುತ್ತೂರು ಕಾಂಗ್ರೆಸ್ ಮುಖಂಡರು ರಾಜೇಂದ್ರ ಕುಮಾರ್ ರವರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ, ಆರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಅಲಿ, ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ, ಪುತ್ತೂರು ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ, ಕಾಂಗ್ರೆಸ್ ಮುಖಂಡ, ಉದ್ಯಮಿ ಶಿವರಾಮ್ ಆಳ್ವ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿ ಕುಮಾರ್ ರೈ ಬಾಲ್ಯೊಟು ಉಪಸ್ಥಿತರಿದ್ದರು.