ಕಡಬ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪ್ರೌಢ ಶಾಲಾ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಕಡಬ ತಾಲೂಕಿನ ಆಲಂಕಾರು ಕೊಂಡಾಡಿ ನಿವಾಸಿ ಜಗದೀಶ್ ಕುಂಬಾರ ಎಂಬವರ ಪುತ್ರಿ ದೀಕ್ಷಾ(14) ಎನ್ನಲಾಗಿದೆ.
ದೀಕ್ಷಾ ಆಲಂಕಾರು ದುರ್ಗಾಂಬಾ ಪ್ರೌಢ ಶಾಲಾ 9 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಫೆ.24 ರಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.