ಸುಳ್ಯ: ಒಣಗಿದ ತೆಂಗಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಮೂಲದ ವಾಹನಕ್ಕೆ ಹಾನಿಯಾದ ಘಟನೆ ಸುಳ್ಯ ಮುಖ್ಯ ರಸ್ತೆಯ ಹಳೆಯ ಪೋಲಿಸ್ ಠಾಣೆಯ ಮುಂಭಾಗದಲ್ಲಿ ನಡೆದಿದೆ.
ತೆಂಗಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ರಸ್ತೆಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಮೂಲದ ವಾಹನಕ್ಕೆ ಹಾನಿಯಾಗಿದ್ದು, ಮರ ಬೀಳುವ ವೇಳೆಯಲ್ಲಿ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದಲ್ಲಿ ಪ್ರಾಣ ಹಾನಿಯಾಗುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ಆಂತಕ ವ್ಯಕ್ತ ಪಡಿಸಿದ್ದಾರೆ.
ತೆಂಗಿನ ಮರ ಕೆಲ ಸಮಯಗಳಿಂದ ಸತ್ತು ಒಣಗಿದ ಸ್ಥಿತಿಯಲ್ಲಿತ್ತು. ಆದರೆ ಇಲ್ಲಿಯ ತನಕ ಅದನ್ನು ಕಡಿಯದೆ, ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.