ನೆಲ್ಯಾಡಿ: ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ಫೆ.27ರಂದು ಶಿರಾಡಿ ಗ್ರಾಮದ ಉದನೆಯಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ75ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ವೋಲ್ವೋ ಬಸ್ಸಿನ ಹಿಂಬದಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 6 ಮಂದಿ ಗಾಯಗೊಂಡಿರುವುದಾಗಿ ಹೇಳಲಾಗುತ್ತಿದ್ದು, ಗಾಯಾಳುಗಳನ್ನು ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.