ವಿಟ್ಲ: ಪಲ್ಸ್ ಪೋಲಿಯೋ ಕಾರ್ಯಕ್ರಮ ಮೈರ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ ರವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ ಕಲ್ಲಂಗಳ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಲೋಲಾಕ್ಷಿ, ಆಶಾ ಕಾರ್ಯಕರ್ತೆ ಕಮಲ, ಅಂಗನವಾಡಿ ಕಾರ್ಯಕರ್ತೆ ಅನುಸೂಯ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. 0-5 ವರ್ಷದೊಳಗಿನ 37 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು.