ಉಪ್ಪಿನಂಗಡಿ: ಬೈಕ್ ಅಪಘಾತವಾಗಿ ಸವಾರ ಸಾವನ್ನಪ್ಪಿ, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬಜತ್ತೂರು ಗ್ರಾಮದ ಬೆದ್ರೋಡಿ ನಿವಾಸಿ ಗಾರೆ ಕೆಲಸಗಾರ ನವಾಜ್ ಎನ್ನಲಾಗಿದೆ.
ಕೆಲಸದ ನಿಮಿತ್ತ ನೆಕ್ಕಿಲಾಡಿಗೆ ತೆರಳುತ್ತಿದ್ದ ವೇಳೆ ಬೈಕ್ ಅಪಘಾತವಾಗಿದ್ದು, ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದು, ಗಂಭೀರ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವಾಜ್ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.