ಪುತ್ತೂರು: ಅರ್ಯಾಪು ವಲಯ ಕಾಂಗ್ರೆಸ್ ಸಭೆಯು ಒಳತಡ್ಕದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಾವಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಅರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ರೈ ತೊಟ್ಲ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಿ ಮಹಾಬಲ ರೈ ಒಳತಡ್ಕ, ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶುಕೂರ್ ಹಾಜಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಶಾರದಾ ಅರಸ್, ಪಂಚಾಯತ್ ರಾಜ್ ಸಂಘಟಣೆಯ ಅಧ್ಯಕ್ಷ ಸಂತೋಷ ಭಂಡಾರಿ ಚಿಲ್ಮೆತ್ತಾರ್, ಹಾಗೂ ಹಲವಾರು ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.