ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಕಾರು ಅಪಘಾತವಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯಿಂದ ಕಾರಿನಲ್ಲಿ ನಾಲ್ವರು ಸ್ನೇಹಿತರು ಬೆಂಗಳೂರಿಗೆ ಸಾಗುತ್ತಿದ್ದು ಕಾರು ಅಪಘಾತದಿಂದಾಗಿ 23 ವರ್ಷದ ಅಕ್ಷಯ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇನ್ನು ಉಳಿದ ತೇಜಸ್, ಪವನ್, ಹರ್ಷ ಎಂಬ ಮೂವರಿಗೆ ಗಂಭೀರ ಗಾಯವಾಗಿದ್ದು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



























