ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಕೆ. ರವಿರಾಜ್ ಹೆಗ್ಡೆ ರಾಜೀನಾಮೆ ನೀಡಿದ್ದಾರೆ.
‘ಒಕ್ಕೂಟದ ಅಧ್ಯಕ್ಷನಾಗಿ ಆಡಳಿತ ಮಂಡಳಿಯ ನಿರ್ದೇಶಕರ ಹಾಗೂ ಸಿಬ್ಬಂದಿಯ ಸಹಕಾರದಿಂದ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗಿದೆ. ಕೋವಿಡ್–19 ಸಂಕಷ್ಟದ ಪರಿಸ್ಥಿತಿಯನ್ನೂ ಸಮರ್ಥವಾಗಿ ನಿಭಾಯಿಸಲಾಗಿದೆ.
ಹಾಲಿನ ಉತ್ಪಾದನೆಯಲ್ಲಿ ಸ್ವಾವಲಂಬಿ ಒಕ್ಕೂಟವಾಗಿ ಮೂಡಿ ಬಂದಿರುವ ಸಂತೃಪ್ತಿಯೊಂದಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ರವಿರಾಜ್ ಹೆಗ್ಡೆ ತಿಳಿಸಿದ್ದಾರೆ.