ಪುತ್ತೂರು: ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದ ಹಿನ್ನಲೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮುಖ್ಯಗುರು ಮಧ್ಯಾಹ್ನದ ಬಳಿಕ ಶಾಲೆಗೆ ರಜೆ ಘೋಷಿಸಿದ ಘಟನೆ ಈಶ್ವರಮಂಗಲದ ಸುರುಳಿಮಲೆ
ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯರು ಕೋರ್ಟ್ ಆದೇಶದಂತೆ, ಶಾಲಾ ಕೊಠಡಿಯೊಳಗೆ ಹಿಜಾಬ್ ಧರಿಸದಂತೆ ಶಾಲಾ ಆಡಳಿತ ಮಂಡಳಿಯವರು ಸೂಚನೆ ನೀಡಿದ್ದರು. ಆದರೂ ಕೆಲ
ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದು ಶಾಲಾ ಕೊಠಡಿಯ ಹೊರಗಡೆ ನಿಂತಿದ್ದರು.
ಕೆಲ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರ ಪರ ನಿಂತು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸಂಪ್ಯ ಪೊಲೀಸರೂ ಆಗಮಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯಗುರುಗಳು, ಮಾ.3ರ ಮಧ್ಯಾಹ್ನದ ಬಳಿಕ ಹಾಗೂ ಮಾ.4ರಂದು ಶಾಲೆಗೆ ರಜೆ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.



























