ಮಂಗಳೂರು: ವೆನ್ಲಾಕ್ ಆಸ್ಪತ್ರೆ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಿದೆ. ಇತ್ತೀಚೆಗಷ್ಟೇ ಅಲ್ಲಿನ ಅಧಿಕಾರಿಯೊಬ್ಬ ನಾಲ್ಕೈದು ಮಹಿಳಾ ಸಿಬ್ಬಂದಿಗಳ ಜೊತೆ ಪಲ್ಲಂಗದಾಟ ನಡೆಸುತ್ತಿರುವ ವೀಡಿಯೋಗಳು ಸಾಮಾಜಿಕ ತಾಣಗಳಲ್ಲಿ ಸಾಕಷ್ಟು ಹರಿದಾಡಿದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿ ಕಾಮುಕ ಅಧಿಕಾರಿಯನ್ನು ಜೈಲಿಗಟ್ಟಿದ್ದರು. ಇದೀಗ ಅದೇ ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿಯೋರ್ವನ ಕುಡುಕ ಪುರಾಣ ಬಯಲಾಗಿದೆ.
ಬೆಳ್ಳಂಬೆಳಗ್ಗೆ ಕಂಠಪೂರ್ತಿ ಕುಡಿದು ತೂರಾಡುತ್ತಲೇ ಕರ್ತವ್ಯಕ್ಕೆ ಹಾಜರಾಗುವ ಈತ ಆಸ್ಪತ್ರೆಯೊಳಗೆ ಅತ್ತಿತ್ತ ಹೆಜ್ಜೆ ಹಾಕುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸಾರ್ವಜನಿಕರ ತೆರಿಗೆ ಹಣದಲ್ಲಿ ಸಂಬಳ ಪಡೆಯುತ್ತಿರುವ ಇಂತಹ ಸಿಬ್ಬಂದಿಗಳು ವೆನ್ಲಾಕ್ ಆಸ್ಪತ್ರೆಗೆ ಅನಿವಾರ್ಯವೇ ಎಂಬುದು ಜನಸಾಮಾನ್ಯರ ಪ್ರಶ್ನೆಯಾಗಿದೆ.
ಇಂತಹ ಸಿಬ್ಬಂದಿಗಳ ವಿರುದ್ಧ ತಕ್ಷಣವೇ ಆರೋಗ್ಯಾಧಿಕಾರಿಗಳು ಕ್ರಮ ಜರುಗಿಸಿ ಸೇವೆಯಿಂದಲೇ ವಜಾಗೊಳಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ…