ಕಲಬುರಗಿ: ವಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಗರದ ಪಿ.ಎನ್.ಟಿ.ಕಾಲೋನಿಯಲ್ಲಿ ನಡೆದಿದೆ.
ನಗರದ ಪಿ.ಎನ್.ಟಿ.ಕಾಲೋನಿಯ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ದುರ್ದೈವಿಯಾಗಿದ್ದು, ಕೆಲ ತಿಂಗಳುಗಳ ಹಿಂದೆ ಪ್ರೀತಂ ಅನ್ಯಕೋಮಿನ ಯುವತಿಯನ್ನು ವಿವಾಹವಾಗಿದ್ದನು.
ಇದೇ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಸ್ಟೇಶನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























