ಪುತ್ತೂರು: ಕೋಡಿಂಬಾಡಿ ಗ್ರಾಮದ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಜಿಲ್ಲಾ ಮಟ್ಟದ 60 ಕೆ.ಜಿ.ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-2022 ಹಾಗೂ ದೇರಳಕಟ್ಟೆ ಯೇನಪೋಯ ವೈದ್ಯಕೀಯ ಕಾಲೇಜು, ಆಸ್ಪತ್ರೆ ಹಾಗೂ ಸಮುದಾಯ ದಂತ ವಿಭಾಗ, ದಂತ ಕಾಲೇಜು ಹಾಗೂ ಆಸ್ಪತ್ರೆ ವತಿಯಿಂದ ಉಚಿತ ವೈದ್ಯಕೀಯ ದಂತ ಶಿಬಿರ ಮತ್ತು ನೇತ್ರ ಜಾಗೃತಿ ಹಾಗೂ ನೇತ್ರದಾನ ನೋಂದಾವಣೆ ಕಾರ್ಯಕ್ರಮ ಮಾ.6 ರಂದು ಸೇಡಿಯಾಪು ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಜಯಪ್ರಕಾಶ್ ಬದಿನಾರು ರವರು, ಪುತ್ತೂರು ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಪಂದ್ಯಾಟ ಉದ್ಘಾಟಿಸುವರು. ವೈದ್ಯ ಡಾ.ಸುರೇಶ್ ಪುತ್ತೂರಾಯ ವೈದ್ಯಕೀಯ ಶಿಬಿರ ಉದ್ಘಾಟಿಸುವರು. ವೈದ್ಯ ಡಾ.ರಘು ಬೆಳ್ಳಿಪ್ಪಾಡಿ ನೇತ್ರದಾನ ನೋಂದಾವಣೆ ಉದ್ಘಾಟನೆ ಮಾಡಲಿದ್ದು, ಭಾರತೀಯ ದಂತ ವೈದ್ಯಕೀಯ ಸಂಘದ ಪುತ್ತೂರು ಶಾಖಾ ಮಾಜಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ. ದಂತ ಚಿಕಿತ್ಸಾ ಶಿಬಿರ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಪುತ್ತೂರು ಡಿವೈಎಸ್‌ಪಿ ಡಾ.ಗಾನ ಪಿ.ಕುಮಾರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.
ಸಂಜೆ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಚೇರ್‌ಮ್ಯಾನ್ ರಾಕೇಶ್ ಮಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸೈನಿಕೆ ಸವಿತಾ ವಿ.ಶೆಟ್ಟಿ, ಹಾಲಿ ಸೈನಿಕರಾದ ಪುಷ್ಪರಾಜ್ ಬಾರ್ತಿಕುಮೇರು, ಚಂದ್ರಹಾಸ ಗೌಡ ಸೇಡಿಯಾಪು ಅವರನ್ನು ಉದ್ಯಮಿ ಅಶೋಕ್ ಕುಮಾರ್ ರೈ ಸನ್ಮಾನಿಸುವರು. ಮುಖ್ಯ ಅತಿಥಿಗಳಾಗಿ ಅಮೇಚೂರ್ ಕಬಡ್ಡಿ ಎಸೋಸಿಯೇಶನ್ ತಾಲೂಕು ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ಸಹಿತ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಬಹುಮಾನ ವಿತರಣಾ ಕಾರ್ಯಕ್ರಮ ತಡರಾತ್ರಿ ನಡೆಯಲಿದ್ದು, ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ ಕುಲಾಲ್ ಅಧ್ಯಕ್ಷತೆ ವಹಿಸಲಿದ್ದು, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಅಧ್ಯಕ್ಷ ನಿರಂಜನ ರೈ ಸೇರಿದಂತೆ ಮತ್ತಿತರರು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.