ಮಂಗಳೂರು: ಹಿಜಾಬ್ ವಿವಾದದ ವಿಡಿಯೋ ವೈರಲ್ ಆಗಿರುವ ದಯಾನಂದ ಪೈ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತ ಸಾಯಿ ಸಂದೇಶ್ ರವರಿಗೆ ಅಪರಿಚಿತರಿಂದ ಜೀವ ಬೆದರಿಕೆ ಕರೆಗಳು ಬರುತ್ತಿದೆ ಎಂದು ದೂರು ನೀಡಿದ್ದಾರೆ.
ಜೀವ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಸೈಬರ್ ಠಾಣೆಗೆ ದೂರು ನೀಡಲಾಗಿದ್ದು, ವಿದೇಶಿ ಸಂಖ್ಯೆಗಳಿಂದ ಕರೆ ಬರುತ್ತಿದ್ದು, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮೂಲಕವೂ ಕರೆಗಳು ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ನಗರದ ರಥಬೀದಿಯ ದಯಾನಂದ ಪೈ- ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಮತ್ತು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಈ ಬಗ್ಗೆ ದೂರು ದಾಖಲಾಗಿದೆ.