ಕಾಸರಗೋಡು : ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ. ಪಿಲಿಕ್ಕೋಡು ಮಡಿವಾಯಿಯ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದಹಿ (10), ಶಿವಾನಂದ (6) ಮೃತಪಟ್ಟವರು.
ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿದೆ. ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷ ವುಣಿಸಿ ಬಳಿಕ ಆತ್ಮಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ.
ಕಾಞಂಗಾಡ್‌ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ. ಇಬ್ಬರು ಮಕ್ಕಳು ತಂದೆ ಜೊತೆ ವಾಸವಾಗಿದ್ದರು. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಚಂದೇರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.