ತುಮಕೂರು: ಜುಲೈ 15 ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಸಿದ್ದಗಂಗಾ ಮಠದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಸಚಿವರು, ಕೊರೊನಾ ಎರಡನೇ ಅಲೆ ಶುರುವಾಗಿದೆ ಅದನ್ನೂ ಗಮನದಲ್ಲಿ ಇರಿಸಿಕೊಳ್ಳಬೇಕು.1-5ನೇ ತರತಿಗಳು ನಡೆಯಬಾರದು. ಖಾಸಗಿ ಶಾಲೆಗಳು ನಿಯಮ ಉಲ್ಲಂಘಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಾರ್ಚ್ 1 ರಿಂದ 1-5 ನೇ ತರಗತಿ ಆರಂಭಿಸುವ ಇಚ್ಛೆ ನನಗೂ ಇತ್ತು. ಆದರೆ ಚರ್ಚೆ ಮಾಡಿ ಬೇಡ ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆ ಎಂದರು.
ಶಾಲೆ ಆರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳು ಗಣಿತ ಮರೆತಿದ್ದಾರೆ. ಭಾಷೆ ಮರೆತಿದ್ದಾರೆ ಅನ್ನೋದು ವರದಿಯಲ್ಲಿ ಇದೆ. ಹಾಗಾಗಿ ರಾಜ್ಯ ಸರ್ಕಾರ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಕಡೆಗೂ ಗಮನ ಕೊಡುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.