ವಿಟ್ಲ: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ ಹಾಗೂ ಲಯನ್ಸ್ ಜಿಲ್ಲಾ ಪ್ರಾಂತೀಯ ಏಳರ ಪ್ರಥಮ ಮಹಿಳೆ ಅನಿತಾ ಹೇಮನಾಥ ಶೆಟ್ಟಿ ಅವರನ್ನು ಶಾಲು ಹೊದಿಸಿ, ಹೂಗುಚ್ಛ ನೀಡಿ, ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾಕ್ಟರ್ ಶ್ರೀಜಾ, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷ ಬಿ. ಸಂದೇಶ ಶೆಟ್ಟಿ, ಪ್ರಾಂತೀಯ ಸಲಹೆಗಾರರಾದ ಸುದರ್ಶನ್ ಪಡಿಯಾರ್ ವಿಟ್ಲ, ಸದಸ್ಯರಾದ ಹರೀಶ್ ಶೆಟ್ಟಿ ಡಿ , ಪುತ್ತೂರು ಬಂಟರ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯದರ್ಶಿ ವತ್ಸಲ ರೈ ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.