ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ಬಳಿ ಹೋಟೆಲ್ ಆದಿತ್ಯ ಹಿಂಭಾಗದಲ್ಲಿರುವ ಸೂರಂಬೈಲ್ ಶಾಂತಾರಾಮ್ ಭಟ್ ಎಂಬವರಿಗೆ ಸೇರಿದ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು, ಧಗಧಗನೆ ಹೊತ್ತಿ ಉರಿಯಲಾರಂಭಿಸಿ ಅದರಲ್ಲಿದ್ದ ಅಡಿಕೆ, ತೆಂಗಿನ ಕಾಯಿ ಹಾಗೂ ಸಾಮಾಗ್ರಿಗಳು ಸುಟ್ಟು ಕರಕಲಾಗಿದೆ.
ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರ ಈ ಕಟ್ಟಡದಲ್ಲಿದ್ದು, ನಿನ್ನೆ ಸಂಜೆವರೆಗೂ ಅದರಲ್ಲಿ ಕೆಲಸ ಮಾಡಲಾಗಿತ್ತು. ಅದರಿಂದ ಹಾರಿರಬಹುದಾದ ಕಿಡಿ ಇಷ್ಟೆಲ್ಲ ಅನಾಹುತಕ್ಕೆ ಕಾರಣವಾಗಿರಬಹುದೆಂದು ಸಂಶಯ ವ್ಯಕ್ತವಾಗಿದೆ.
ಇಂದು ಬೆಳಗಿನ ಜಾವದಲ್ಲಿ ಬೆಂಕಿಯ ಕೆನ್ನಾಲಗೆ ಮುಗಿಲೆತ್ತರಕ್ಕೆ ಚಾಚಿದ್ದು, ಸ್ಥಳಾಕ್ಕಾಗಮಿಸಿದ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದು, ಆದರೇ ವಸ್ತುಗಳೆಲ್ಲಾ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.