ಮಡಿಕೇರಿ: ತಂದೆ ಹಾಗೂ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯ ಬಿಳುಗುಂದ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ತಂದೆ ಸುಬ್ಬಯ್ಯ (76) ಹಾಗೂ ಪುತ್ರ ಗಿರೀಶ್ (39) ಮೃತ ವ್ಯಕ್ತಿಗಳು. ಮಾ.7 ರಂದು ಸಂಜೆ ಮಂಡಲ ಕಚೇರಿಗೆ ಹೋಗಿ ಬರುವುದಾಗಿ ತೆರಳಿದ್ದ ಸುಬ್ಬಯ್ಯ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಮೀಪದ ತೋಟವೊಂದರಲ್ಲಿ ಪತ್ತೆಯಾಗಿತ್ತು. ಇದರಿಂದ ಮನನೊಂದ ಪುತ್ರ ಗಿರೀಶ್ ಮಾ.8 ರಂದು ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ.

ಸುಬ್ಬಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಗಿರೀಶ್ ಪತ್ನಿಯನ್ನು ತೊರೆದಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಬ್ಬಯ್ಯ ಅವರ ಪತ್ನಿ ಕಾವೇರಮ್ಮ ಅವರು ನೀಡಿರುವ ದೂರಿನ ಹಿನ್ನೆಲೆ ವಿರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.