ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ನಡೆದಿದೆ
ಅಪಘಾತದಿಂದಾಗಿ ಬೈಕ್ ಸವಾರ ಕೆಮ್ಮಾಯಿ ಬಡಾವು ಗಿರಿಯಪ್ಪ ಪೂಜಾರಿ ಅವರ ಪುತ್ರ ದೇವಿಪ್ರಸಾದ್(33) ರವರು ಹಾರಾಡಿ ಮೂಕಾಂಬಿಕಾ ಗ್ಯಾಸ್ ಏಜೆನ್ಸಿಯಿಂದ ಕೃಷ್ಣನಗರ ಕಡೆ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಪ್ರದೀಪ್ ಎಂಬವರು ಚಲಾಯಿಸುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ದೇವಿಪ್ರಸಾದ್ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯವಾಗಿದ್ದು, ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಿದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,ಪುತ್ತೂರು ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.