ಪಂಚರಾಜ್ಯಗಳಲ್ಲಿ ಚುನಾವಣಾ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಆರಂಭದಲ್ಲೇ ಮುನ್ನಡೆ ಪಡೆದುಕೊಂಡಿದೆ.
ಉತ್ತರ ಪ್ರದೇಶದಲ್ಲಿ 403 ಸ್ಥಾನಗಳಿಗೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 278, ಎಸ್ ಪಿ 105, ಬಿಎಸ್ ಪಿ 7, ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದೆ.
ಉತ್ತರ ಪ್ರದೇಶದಲ್ಲಿ ನಡೆದ 7 ಹಂತಗಳ ಚುನಾವಣೆ ನಡೆದಿದ್ದು, ಬಹುಮತ ಗಳಿಸಲು ಪಕ್ಷಗಳು 202 ಮ್ಯಾಜಿಕ್ ನಂಬರ್ ಆಗಿದೆ. ಆರಂಭಿಕ ಮತ ಎಣಿಕೆ ಮಾಹಿತಿ ಪ್ರಕಾರ ಗೋವಾ, ಉತ್ತರಾಖಂಡ್ ರಾಜ್ಯಗಳಲ್ಲಿ ಕಾಂಗ್ರೆಸ್ 19 ಮತ್ತು ಮಣಿಪುರದಲ್ಲಿ ಬಿಜೆಪಿ 15 ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುನ್ನಡೆ ದಾಖಲಿಸಿದೆ.
ಉತ್ತರ ಪ್ರದೇಶದಲ್ಲಿ 403, ಪಂಜಾಬ್ 117, ಉತ್ತರಾಖಂಡ್ 70, ಮಣಿಪುರ 60 ಹಾಗೂ ಗೋವಾದ 40 ಸ್ಥಾನಗಳಲ್ಲಿ ಮತದಾನವಾಗಿದ್ದು, ಇಂದು ಎಲ್ಲ ರಾಜ್ಯಗಳ ಫಲಿತಾಂಶ ಬಹಿರಂಗಗೊಳ್ಳಲಿದೆ.