ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಸರಕಾರಿ ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ ನ್ಯಾಯಾಲಯದ ಮದ್ಯಂತರ ತೀರ್ಪು ಪಾಲನೇ ಆಗದೇ ಇರುವುದರ ಕುರಿತು ಹಾಗೂ ಸರಕಾರದ ಆದೇಶ ಪಾಲನೇ ಆಗದೇ ಇರುವ ಕುರಿತು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೆಟ್ಟಣಿಗೆ ಮುಡ್ನೂರು ಗ್ರಾಮಪಂಚಾಯತ್ ಸದಸ್ಯರಾದ ಚಂದ್ರಹಾಸ ಈಶ್ವರಮಂಗಲ ರವರು ಕ್ಷೇತ್ರ ಮನವಿ ನೀಡಿದರು.
ನೆಟ್ಟಣಿಗೆ ಮುಡ್ನೂರು ಶಾಲೆಯ ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದಾರೆ. ಈಗಾಗಲೇ ಸರಕಾರದ ಆದೇಶವಿದೆ ಹಾಗೂ ನ್ಯಾಯಾಲಯದ ಮಧ್ಯಂತರ ತೀರ್ಪು ಕೂಡ ಇದೆ ಆದರೆ ಈ ಆದೇಶಗಳು ನಮ್ಮ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಪಾಲನೆಯಾಗುತ್ತಿಲ್ಲ, ಆದ್ದರಿಂದ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸರಕಾರದ ಆದೇಶ ಪಾಲನೆಯಾಗುವಂತೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಸರ್ಕಾರಿ ಶಾಲೆಗಳಿಗೆ ಆದೇಶ ನೀಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.





























