ನವದೆಹಲಿ: ಗೋಕುಲ್ಪುರದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 7 ಮಂದಿ ಜೀವವನ್ನ ಕಳೆದುಕೊಂಡಿದ್ದಾರೆ. ದುರ್ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡಿಸಲಲ್ಲಿ ಬೆಂಕಿ ಕಾಣಿಸಿಕೊಂಡು ಅನಾಹುತ ಸಂಭವಿಸಿದೆ. ಕನಿಷ್ಟ 60ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿದೆ.
ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಲಾಗಿದೆ. 13 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಒಂದು ಕೋಟಿ ಪರಿಹಾರ:
ಬೆಂಕಿಯಲ್ಲಿ ಸುಟ್ಟು ಹೋಗಿರುವ 7 ಮೃತದೇಹಗಳು ಪತ್ತೆಯಾಗಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ. ನಿದ್ರೆಗೆ ಜಾರಿದ್ದವರು ಬೆಂಕಿ ಅನಾಹುತದಲ್ಲಿ ಸಾವಿಗೀಡಾಗಿದ್ದಾರೆ ಅಂತಾ ಹೇಳಲಾಗಿದೆ. ಇನ್ನು ಅಗ್ನಿ ದುರಂತಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಪ್ರಕರಣವನ್ನ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ. ಅಲ್ಲದೇ ಮೃತರ ಕುಟುಂಬಕ್ಕೆ ಒಂದು ಕೋಟಿ ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ.