ಪುತ್ತೂರು: ಅಪರಿಚಿತ ಮೊಬೈಲ್ ನಂಬರ್ ನಿಂದ ಕರೆ ಮಾಡಿ ಬಿಜೆಪಿ ಮುಖಂಡರೋರ್ವರಿಗೆ ಜೀವ ಬೆದರಿಕೆ ಹಾಕಿದ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ.
ಬಿಜೆಪಿ ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಹಾಗೂ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಹಾಸ ಈಶ್ವರಮಂಗಲ ರವರಿಗೆ ಯಾರೋ ಅಪರಿಚಿತರು ಕರೆ ಮಾಡಿ ‘ಶರತ್ ಮಡಿವಾಳನನ್ನು ಹತ್ಯೆ ಮಾಡಿದಂತೆಯೇ ನಿನ್ನನ್ನು ಹತ್ಯೆ ಮಾಡುವುದಾಗಿ’ ಜೀವ ಬೆದರಿಕೆ ಹಾಕಿದ್ದು, ಈ ಬಗ್ಗೆ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚಂದ್ರಹಾಸ ರವರು ನಿನ್ನೆ ಹಿಜಾಬ್ ವಿಷಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದು, ಈ ಹಿನ್ನೆಲೆ ಅವರನ್ನೇ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಜೀವ ಬೆದರಿಕೆ ಕರೆ ಮಾಡಿದ್ದಾರೆನ್ನಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ದಿನಗಳಲ್ಲಿ ಅನೇಕರಿಗೆ ಈ ರೀತಿಯ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ಇಲಾಖೆಯು ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ.



























