ಉಡುಪಿ: ಸಿಟಿ ಬಸ್ ನಿಲ್ದಾಣದ ರಸ್ತೆಯಲ್ಲಿರುವ ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯವಾಟಿಕೆ ದಂಧೆ ನಡೆಸಲಾಗುತ್ತಿರುವುದು ಬೆಳಕಿಗೆ ಬಂದಿದೆ. ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಶೇಖರ್ ಶೆಟ್ಟಿ, ಜಾನ್ಸನ್ ಅಲ್ಮೇಡಾ ಮತ್ತು ಹರ್ಷಿತ್ ಶೆಟ್ಟಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾಡ್ಜ್ ದಿವಂಗತ ಭಾಸ್ಕರ್ ಶೆಟ್ಟಿಯವರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಸೇರಿದೆ. ಆಕೆಯ ಮೇಲೂ ಪ್ರಕರಣ ದಾಖಲಾಗಿದೆ.