ತುಮಕೂರು: ನೂರಾರು ಜನರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಮಿಯಾನ ಕುಸಿದು ಬಿದ್ದ ಘಟನೆಯೊಂದು ತುಮಕೂರು ಜಿಲ್ಲೆಯ 30 ನೇ ವಾರ್ಡ್ ಗಾರೆನರಸಯ್ಯ ಕಟ್ಟೆಯಲ್ಲಿ ನಡೆದಿದೆ.
ಕಾರ್ಪೋರೇಟರ್ ವಿಷ್ಣುವರ್ಧನ್, ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಪುತ್ರಿ ಶ್ರದ್ಧಾ , ಶಾಸಕ ಜೆ ಬಿ ಜ್ಯೋತಿ ಗಣೇಶ್, ಮೇಯರ್ ಬಿ.ಜಿ.ಕೃಷ್ಣಪ್ಪ ಸೇರಿದಂತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾರೆನರಸಯ್ಯ ಕಟ್ಟೆ ( ಕೆರೆ)ಯನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಅಭಿವೃದ್ಧಿ ಪಡಿಸಲಾಗಿತ್ತು. ಈ ಕೆರೆಯನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಹಿನ್ನೆಲೆ ಇಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಎಲ್ಲಾ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆ ಮುಂಭಾಗ ನೂರಾರು ಜನ ಆಸೀನರಾಗಿದ್ದರು. ಈ ವೇಳೆ ರಭಸವಾಗಿ ಬೀಸಿದ ಬಿರುಗಾಳಿಗೆ ಶಾಮಿಯಾನ ಕುಸಿದಿದೆ. ಭಯದಿಂದ ಜನ ದಿಕ್ಕುಪಾಲಾಗಿ ಓಡಿ ಹೋಗಿದ್ದಾರೆ.