ವಿಟ್ಲ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಕೋಡಪದವು ಸರಾವು ಎಂಬಲ್ಲಿ ನಡೆದಿದೆ.
ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರಿಗೆ ಸೇರಿದ ಕಾರು ಸಂಪೂರ್ಣವಾಗಿ ಸುಟ್ಟು ಕರಲಾಗಿದೆ.
ಸಿಟ್ರೀನ್ ರವರು ತನ್ನ ಡಸ್ಟರ್ ಕಾರಿನಲ್ಲಿ ಬೋಳಂತೂರು ಕಡೆಯಿಂದ ಕೋಡಪದವು ಮೂಲಕ ವಿಟ್ಲ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಶಬ್ದ ಕೇಳಿಸಿದ್ದು, ದಿಢೀರನೆ ಕಾರನ್ನು ಬದಿಗೆ ಬಂದು ನಿಲ್ಲಿಸಿದ್ದಾರೆ. ಈ ಸಂದರ್ಭ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅವರು ಕಾರಿನಿಂದ ಹೊರಗಡೆ ಬಂದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.




























