ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ಮಡೆನೂರು ಗೇಟ್ ಬಳಿ ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದ್ದು,ಈ ಭಾಗದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದವೆಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.