ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಕಾರ್ಯಕ್ಷೇತ್ರ ವ್ಯಾಪ್ತಿಯ ನರಿಕೊಂಬು ಎ ಮತ್ತು ನರಿಕೊಂಬು ಬಿ ಒಕ್ಕೂಟಗಳ ಸಾಧನಾ ಸಮಾವೇಶ ಹಾಗೂ ಪದಗ್ರಹಣ ಸಮಾರಂಭ ಸತ್ಯಶ್ರೀ ಕಲ್ಯಾಣ ಮಂಟಪ ನರಿಕೊಂಬು ಪಾಣೆಮಂಗಳೂರಿನಲ್ಲಿ ಸತ್ಯಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ನರಿಕೊಂಬು ಇದರ ಅಧ್ಯಕ್ಷರಾದ ಭೋಜ ಕೊಟ್ಟಾರಿ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ನಿಕಟಪೂರ್ವ ಅಧ್ಯಕ್ಷರಾದ ಕೆಯ್ಯೂರು ನಾರಾಯಣ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು.
ಸ್ವ ಸಹಾಯ ಸಂಘಗಳ ಮುಖಾಂತರ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ. ಒಂದು ಕಾಲದಲ್ಲಿ ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರು ಇವತ್ತು ಎಲ್ಲ ಕ್ಷೇತ್ರದಲ್ಲಿ ಮಹಿಳೆಯರು ಸ್ಥಾನ ಹುದ್ದೆಗಳಲ್ಲಿದ್ದಾರೆ. ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ ಆಗಿರೋದರಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ಜವಾಬ್ದಾರಿ ತಾಯಂದಿರಲ್ಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ಪ್ರಾಂತೀಯ ನಿರ್ದೇಶಕರಾದ ಸತೀಶ್ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಯೋಜನೆಯ ಅಧಿಕಾರ, ಹಸ್ತಾಂತರದ ಉದ್ದೇಶ ,ಪದಾಧಿಕಾರಿಗಳ ಕರ್ತವ್ಯ ಬಗ್ಗೆ ಮಾಹಿತಿ ನೀಡಿದರು. ಹಾಗೂ ಸರಕಾರವು ಜಾರಿಗೆ ತಂದ ಕೆಲವು ಯೋಜನೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಾರ್ಯರೂಪಕ್ಕೆ ತರುವುದರಲ್ಲಿ ಪ್ರಮುಖ ಸ್ಥಾನವನ್ನು ವಹಿಸಿದೆ ಎಂದರು.
ವೇದಿಕೆಯಲ್ಲಿ ಪ್ರಗತಿಪರ ಕೃಷಿಕರಾದ ಪ್ರೇಮನಾಥ ಶೆಟ್ಟಿ ಅಂತರ, ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ರವಿ ಅಂಚನ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಶ್ರೀ ಮಾಧವ ವಲವೂರು, ನರಿಕೊಂಬು ಎ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳಾದ ಹೇಮಲತಾ ಕಸ್ತೂರಿ ಅರುಣಾಕ್ಷಿ ಅನಿತಾ ನರಿಕೊಂಬು ಬಿ ಒಕ್ಕೂಟದ ಅಧ್ಯಕ್ಷ ನಳಿನಿ ಹಾಗೂ ಪದಾಧಿಕಾರಿಗಳಾದ ದಾಮೋದರ ಚೇತನ ಮಮತಾ, ಗೀತಾ,ನರಿಕೊಂಬು ಎ ಒಕ್ಕೂಟದ ನೂತನ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ ಹಾಗೂ ಪದಾಧಿಕಾರಿಗಳಾದ ಗುಲಾಬಿ ಯಶೋಧ ಜಯಲಕ್ಷ್ಮಿ ರೋಹಿತ್ ಕುಮಾರ್ ನರಿಕೊಂಬು ಬಿ ಒಕ್ಕೂಟದ ನೂತನ ಅಧ್ಯಕ್ಷ ಜಯಂತ ಹಾಗೂ ಪದಾಧಿಕಾರಿಗಳಾದ ರೂಪ, ಸುನಿತಾ, ಭಾರತಿ ,ಆಶಾಲತಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅತ್ಯುತ್ತಮ ಸ್ವಸಹಾಯ ಸಂಘಗಳನ್ನು ಗುರುತಿಸಿ ಸನ್ಮಾನಿಸಲಾಯಿತು. ಯೋಜನೆಯ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆ ಬಹುಮಾನಗಳನ್ನು ವಿತರಿಸಲಾಯಿತು. ಲತಾ, ಪೂರ್ಣಿಮಾ, ರೂಪ ಪ್ರಾರ್ಥಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸ್ವಾಗತಿಸಿ, ನರಿಕೊಂಬು ಎ ಒಕ್ಕೂಟದ ಸೇವಾ ಪ್ರತಿನಿಧಿ ಕುಸುಮ ವರದಿ ವಾಚಿಸಿ, ನರಿಕೊಂಬು ಬಿ ಒಕ್ಕೂಟದ ಸೇವಾ ಪ್ರತಿನಿಧಿ ಪ್ರತಿಭಾ ಬಹುಮಾನ ಪಟ್ಟಿ ವಾಚಿಸಿದರು. ಯೋಗೀಶ್ ವಂದಿಸಿ, ಯತೀಶ್ ಕಾರ್ಯಕ್ರಮ ನಿರೂಪಿಸಿದರು.