ಕೆನಡಾದ ಟೊರೊಂಟೊದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಅಂತಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ. ಹರ್ಪ್ರೀತ್ ಸಿಂಗ್, ಕರಣ್ಪಾಲ್ ಸಿಂಗ್, ಮೋಹಿತ್ ಚೌಹಾಣ್, ಪವನ್ ಕುಮಾರ್, ಜಸ್ಪಿಂದರ್ ಸಿಂಗ್ ಮೃತ ದುರ್ದೈವಿಗಳು. ಮೃತರೆಲ್ಲ 21 ರಿಂದ 24 ವರ್ಷದೊಳಗಿನವರು ಎಂದು ತಿಳಿದು ಬಂದಿದೆ.