ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ಶೋಧ ನಡೆಸುತ್ತಿದ್ದ ಪೊಲೀಸರು ಗೋ ಕಳ್ಳತನದಲ್ಲಿ ತೊಡಗಿದ್ದ ಟೀಂ ಗರುಡಾ ತಂಡದ ನಾಲ್ವರು ಗೋ ಕಳ್ಳರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶರೀಪ್ ಯಾನೆ ಸ್ಕೊರ್ಪಿಯೊ ಶರೀಪ್, ಮುಜಾಹೀದ್ ರೆಹಮಾನ್ ಯಾನೆ ಸಲ್ಮಾನ್,ಅಬ್ದುಲ್ ಮಜೀದ್ ಯಾನೆ ಮಜ್ಜಿಮಜ್ಜಿ,ಸಯ್ಯದ್ ಅಕ್ರಮ್ ಯಾನೆ ಅಕ್ಕು ಸಯ್ಯದ್ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಂದ ಕೃತ್ಯ ನಡೆಸಲು ಉಪಯೋಗಿಸಿದ ಸ್ಕೂಟಿ, ಬಿಳಿ ಸ್ವಿಫ್ಟ್ ಕಾರು, 4 ತಲವಾರು, 2 ಹಗ್ಗಗಳು, ನೀಲಿ ಬಣ್ಣದ ಟರ್ಪಾಲ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಸ್ವಾಧೀನಪಡಿಸಿಕೊಂಡ ಸ್ವತ್ತುಗಳ ಅಂದಾಜು ಮೌಲ್ಯ ಸುಮಾರು ಮೂರು ಲಕ್ಷದ ಇಪತ್ತು ಸಾವಿರ ಎಂದು ಅಂದಾಜು ಮಾಡಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳ ವಿಚಾರಣೆ ಮುಂದುವರೆದಿದೆ.