ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪನ್ನ ನೀಡಲಿದೆ. ತೀರ್ಪಿನ ಬಳಿಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಶಾಲಾ-ಕಾಲೇಜುಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಜೊತೆಗೆ ಕೆಎಸ್ಆರ್ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ.
ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ಎಲ್ಲಾ ವಿಭಾಗದ ಡಿಸಿಪಿಗಳು ಬೆಳಗ್ಗೆ 7 ರಿಂದಲೇ ಬಂದೋಬಸ್ತ್ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಬೆಂಗಳೂರು ಮಾತ್ರವಲ್ಲ ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೋಲಾರ ಜಿಲ್ಲೆಗಳು ಸೇರಿದಂತೆ ರಾಜ್ಯದ ಸೂಕ್ಷ್ಮ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.