ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರುಗದ್ದೆಯಲ್ಲಿ ಮಾ.19-20 ರಂದು ನಡೆಯುವ ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಆಮಂತ್ರಣ ಪತ್ರಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ರವರ ಗೌರವಾಧ್ಯಕ್ಷತೆಯಲ್ಲಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ರವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿರುವ 29ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮುಖ್ಯ ಅತಿಥಿಗಳಾಗಿದ್ದು, ಕಂಬಳ ಸಮಿತಿ ಅಧ್ಯಕ್ಷರಾದ ಎನ್. ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪ್ರಣಮ್ ಶೆಟ್ಟಿ, ಬಿಪಿನ್ ಶೆಟ್ಟಿ ಹಾಗೂ ಮತ್ತಿತರರು ಬೆಂಗಳೂರಿಗೆ ತೆರಳಿ ಅವರನ್ನು ಬಹಳ ವಿಶೇಷವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.





























