ಸುಳ್ಯ: ಹಿಂದೂ ಕಾರ್ಯಕರ್ತರ ವಿರುದ್ಧ ನಿರಂತರ ಸುಳ್ಳು ಕೇಸ್ ದಾಖಲಿಸಿ ದೌರ್ಜನ್ಯ ಎಸಗುತ್ತಿರುವ ಆರೋಪದಲ್ಲಿ ಪುತ್ತೂರು ಡಿವೈಎಸ್ಪಿ ಗಾನ ಕುಮಾರಿ ವಿರುದ್ಧ ಬೃಹತ್ ಹೋರಾಟಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.
ಮಾ. 21 ರಂದು ಪುತ್ತೂರಿನ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಇದರ ಪೂರ್ವಭಾವಿ ಸಭೆ ಇಂದು ಸುಳ್ಯದಲ್ಲಿ ನಡೆಯಿತು.
ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.