ಬೆಂಗಳೂರು: ರಾಜ್ಯ ಭ್ರಷ್ಟಾಚಾರ ನಿಗ್ರಹಣ ದಳ ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದು, ಮಂಗಳೂರು , ಬೆಂಗಳೂರು ಸೇರಿದಂತೆ ರಾಜ್ಯದ 75 ಕಡೆಗಳಲ್ಲಿ ಏಕಕಾಲದಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಿವಿಧ ಇಲಾಖೆಗಳ 18 ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಹೌಸ್, ಲೆಕ್ಕಪತ್ರ ಪರಿಶೋಧಕರ ಮನೆ ಮುಂತಾದೆಡೆ ಎಸಿಬಿ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರುವ ಆರೋಪದಲ್ಲಿ ಈ ದಾಳಿ ನಡೆದಿದೆ.
ರಾಜ್ಯದ ವಿವಿಧ ಇಲಾಖೆಗಳ ಭ್ರಷ್ಟ ಅಧಿಕಾರಿಗಳ ವಿರುದ್ಧ ಮುಂದುವರಿದಿದೆ. ದಾಳಿ ವೇಳೆ ರಾಶಿ ರಾಶಿ ನೋಟುಗಳು, ಕೆಜಿಗಟ್ಟಲೆ ಚಿನ್ನಾಭರಣ, ಬೆಳ್ಳಿ ಪತ್ತೆಯಾಗಿದೆ.
ಬೆಂಗಳೂರು, ಕೊಪ್ಪಳ, ಗದಗ, ಮಂಗಳೂರು, ಬೀದರ್ ಸೇರಿದಂತೆ ಹಲವು ಕಡೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆದಿದೆ. ಮಂಗಳೂರಿನಲ್ಲೂ ಎಸಿಬಿ ದಾಳಿ ನಡೆಸಿದ್ದು ನಗರದ ಮಲ್ಲಿಕಟ್ಟೆ ಲೊಬೊ ಲೈನ್ ನ ಅಪಾರ್ಟ್‌ಮೆಂಟ್ ನಲ್ಲಿರುವ KPTCL ಎಇಇ ದಯಾಸುಂದರ್ ನಿವಾಸ ಮತ್ತು ಕಚೇರಿ ಮೇಲೆ 8 ಜನರ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿಗೊಳಗಾದ 18 ಅಧಿಕಾರಿಗಳು ವಿವರ :
–
- ಜ್ಞಾನೇಂದ್ರಕುಮಾರ್, ಹೆಚ್ಚುವರಿ ಆಯುಕ್ತರು ಸಾರಿಗೆ, ಟ್ರಾಡ್ ಸಾರಿಗೆ ಮತ್ತು ಸುರಕ್ಷತೆ, ಬೆಂಗಳೂರು
- ರಾಕೇಶ್ ಕುಮಾರ್ BDA, ಪಟ್ಟಣ ಯೋಜನೆ
- ರಮೇಶ ಕಣಕಟ್ಟೆ, ಆರ್.ಎಫ್.ಓ. ಸಾಮಾಜಿಕ ಅರಣ್ಯ, ಯಾದಗಿರಿ
- ಬಸವರಾಜ ಶೇಖರ ರೆಡ್ಡಿ ಪಾಟೀಲ್, ಕಾರ್ಯನಿರ್ವಾಹಕ ಅಭಿಯಂತರ, ಕೌಜಲಗಿ ವಿಭಾಗ, ಗೋಕಾಕ
- ಬಸವ ಕುಮಾರ್ ಎಸ್. ಅಣ್ಣಿಗೇರಿ, ಶಿರಸ್ತೇದಾರ್, ಡಿಸಿ ಕಛೇರಿ, ಗದಗ
- ಗಪಿನಾಥ್ ಸಾ ಎನ್ ಮಾಳಗಿ, ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ, ವಿಜಯಪುರ
- ಬಿ ಕೆ ಶಿವಕುಮಾರ್, ಹೆಚ್ಚುವರಿ ಡಿಟೆಕ್ಟರ್, ಇಂಡಸ್ಟ್ರಿವ್ಸ್ ಮತ್ತು ಕಾಮರ್ಸ್, ಬೆಂಗಳೂರು
- ಶಿವಾನಂದ್ ಪಿ ಶರಣಪ್ಪ ಖೇಡಗಿ, RFO, ಬಾದಾಮಿ
- ಮಂಜುನಾಥ್, ಸಹಾಯಕ ಆಯುಕ್ತ, ರಾಮನಗರ
- ಶ್ರೀನಿವಾಸ್, ಜನರಲ್ ಮ್ಯಾನೇಜರ್, ಸಮಾಜ ಕಲ್ಯಾಣ ಇಲಾಖೆ
- ಮಹೇಶ್ವರಪ್ಪ, ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
- ಕೃಷ್ಣನ್ ಎಇ, ಎಪಿಎಂಸಿ, ಹಾವೇರಿ
- ಚಲುವರಾಜ್, ಅಬಕಾರಿ ನಿರೀಕ್ಷಕರು, ಗುಂಡ್ಲುಪೇಟೆ ತಾಲೂಕು
- ಗಿರೀಶ್, ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಸುವಿವಿಭಾಗ
- ಬಾಲಕೃಷ್ಣ ಹೆಚ್ ಎನ್, ಪೊಲೀಸ್ ಇನ್ಸ್ ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
- ಗವಿರಂಗಪ್ಪ, ಎಇಇ, ಪಿಡಬ್ಲ್ಯೂಡಿ, ಚಿಕ್ಕಮಂಗಳೂರು
- ಅಶೋಕ್ ರೆಡ್ಡಿ ಪಾಟೀಲ್, ಎಇಇ, ಕೃಷ್ಣ ಭಾಗ್ಯ ಜಲ ನಿಗಮ ಲಿ, ದೇವದುರ್ಗ ರಾಯಚೂರು
- ದಯಾ ಸುಂದರ್ ರಾಜು, AEE, KPTCL, ದಕ್ಷಿಣ ಕನ್ನಡ