ವಿಟ್ಲ: ವ್ಯಕ್ತಿಯೋರ್ವರು ತೆಂಗಿನ ಮರದಿಂದ ಕಾಯಿ ಕಿತ್ತ ವಿಚಾರಕ್ಕೆ ಸಂಬಂದಿಸಿ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಪುಣಚ ಗ್ರಾಮದ ಪಾವಲುಮೂಲೆ ನಿವಾಸಿ ಸುಂದರ ನಾಯ್ಕ್ ಪುತ್ರಿ ಮಮತಾ ದೂರುದಾರರಾಗಿದ್ದು, ಸ್ಥಳೀಯ ನಿವಾಸಿ ವಾಮನ ನಾಯ್ಕ್ ವಿರುದ್ಧ ದೂರು ನೀಡಿದ್ದಾರೆ.
ಮಾ.14 ರಂದು ಮನೆಯಲ್ಲಿದ್ದ ವೇಳೆ ವಾಮನ ನಾಯ್ಕ್ ರವರು ಬಂದು ನನ್ನ ತಂದೆ ತೆಂಗಿನ ಮರದಿಂದ ತೆಂಗಿನ ಕಾಯಿ ತೆಗೆಸಿದ ವಿಚಾರವಾಗಿ ಅವರಿಗೆ ಬೈಯಲಾರಂಭಿಸಿದರು. ಇದನ್ನು ಪ್ರಶ್ನಿಸಲು ತೆರಳಿದ ನನಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಬಂದ ನನ್ನ ತಾಯಿ ಹಾಗೂ ತಂದೆಯವರಿಗೂ ಹಲ್ಲೆ ನಡೆಸಿ ನಮಗೆ ಜೀವಬೆದರಿಕೆ ಒಡ್ಡಿದ್ದಾರೆ ಎಂದು ಮಮತಾ ರವರು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಯಿಂದ ಗಾಯಗೊಂಡ ಮಮತ ಹಾಗೂ ಅವರ ತಂದೆ ತಾಯಿ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.