ಮಂಗಳೂರು: ಉಳ್ಳಾಲದ ಕುತ್ತಾರ್ ಸಂತೋಷ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.15 ರ ಮಂಗಳವಾರ ರಾತ್ರಿ ನಡೆದಿದೆ.
ಮೃತ ಯುವಕನನ್ನು ಕುದ್ಕೋರಿಗುಡ್ಡೆಯ ದೀಕ್ಷಿತ್ (19) ಎನ್ನಲಾಗಿದೆ.
ದೀಕ್ಷಿತ್ ಕುಟುಂಬ ಮೊದಲು ಕಂಕನಾಡಿ ಬೈಪಾಸ್‌ನ ಕುದ್ಕೋರಿಗುಡ್ಡೆಯಲ್ಲಿ ವಾಸಿಸುತ್ತಿದ್ದು, ಕಳೆದ ಕೆಲ ದಿನಗಳಿಂದ ಈ ಕುಟುಂಬ ಸಂತೋಷ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು.
ಘಟನೆಗೆ ಪ್ರೇಮವೈಫಲ್ಯ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಸದ್ಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.