ಪುತ್ತೂರು: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಎಚ್ಚರಿಕೆ ನೀಡಿದ ಘಟನೆ ಮಾ.15 ರಂದು ಸಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಿನ್ನೆ ಶಾಲಾ ಕಾಲೇಜುಗಳಿಗೆ ರಜೆ ಇದ್ದರೂ ಸಹ ಅನ್ಯಕೋಮಿನ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಜೊತೆಯಾಗಿರುವುದನ್ನು ಗಮನಿಸಿದ ಸಂಘಟನೆಯೊಂದರ ಕಾರ್ಯಕರ್ತರು ಅವರನ್ನು ವಿಚಾರಿಸಿ, ಬಳಿಕ ಸಂಘಟನೆಯ ಕಚೇರಿಗೆ ಕರೆದೊಯ್ದು ಅಲ್ಲಿ ಎಚ್ಚರಿಕೆ ನೀಡಿ, ಅವರ ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿ ಕೊಟ್ಟರು ಎನ್ನಲಾಗಿದೆ.