ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ನಿರಂತರ ಸುಳ್ಳು ಕೇಸ್ ದಾಖಲಿಸಿ ದೌರ್ಜನ್ಯ ಎಸಗುತ್ತಿರುವ ಆರೋಪದಲ್ಲಿ ಪುತ್ತೂರು ಡಿವೈಎಸ್ಪಿ ಗಾನ ಕುಮಾರಿ ವಿರುದ್ಧ ಬೃಹತ್ ಹೋರಾಟಕ್ಕೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.
ಮಾ. 21 ರಂದು ಡಿವೈಎಸ್ಪಿ ಕಛೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದು, ಹಿಂದೂ ಜಾಗರಣ ವೇದಿಕೆ ಗೌರವಾಧ್ಯಕ್ಷ ಡಾ.ಎಮ್.ಕೆ ಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಇದರ ಯಶಸ್ವಿಗಾಗಿ ಇಂದು ಪುತ್ತೂರಿನ ಒಡೆಯ ಶ್ರೀ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಹಿಂದೂ ಜಾಗರಣ ವೇದಿಕೆ ಮುಖಂಡರು ಮತ್ತು ಕಾರ್ಯಕರ್ತರು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.