ಕಡಬ: ಶಾಲೆ ಮುಗಿಸಿ ಮನೆಗೆ ಬಂದ ಬಾಲಕನೊಬ್ಬ ಪೇರಳ ಮರ ಹತ್ತಲು ಹೋಗಿ ಉರುಳಿ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ದೋಳ್ಪಾಡಿ ಬಳಿ ನಿನ್ನೆ ಸಂಜೆ ನಡೆದಿದೆ.
ಮೃತ ಬಾಲಕನನ್ನು ದೋಳ್ಪಾಡಿ ಮರಕ್ಕಡ ನಿವಾಸಿ ದಿವಾಕರ ಗೌಡ ರವರ ಪುತ್ರ ಉಲ್ಲಾಸ್ ಡಿ.ಎಂ (8 ವ.) ಎನ್ನಲಾಗಿದೆ.
ಉಲ್ಲಾಸ್ ದೋಳ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿ ವಿದ್ಯಾರ್ಥಿಯಾಗಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ.
ಉಲ್ಲಾಸ್ ಎಂದಿನಂತೆ ನಿನ್ನೆ ಕೂಡ ಶಾಲೆಗೆ ತೆರಳಿದ್ದು, ಸಂಜೆ ಮನೆಗೆ ಹಿಂತಿರುಗಿದ್ದಾನೆ. ಮನೆಗೆ ಬಂದ ಬಳಿಕ ಮನೆ ಸಮೀಪ ಪೇರಳ ಹಣ್ಣು ಕೊಯ್ಯಲು ಪೇರಳ ಮರಕ್ಕೆ ಹತ್ತಿದ್ದು, ಈ ವೇಳೆ ಆಯತಪ್ಪಿ ಕೆಳಕ್ಕೆ ಉರುಳಿದಾಗ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ಉಲ್ಲಾಸ್ ತಂದೆ ದಿವಾಕರ್ , ತಾಯಿ ಹಾಗೂ ಸಹೋದರನನ್ನು ಅಗಲಿದ್ದಾನೆ.