ಮಂಗಳೂರು: ಕರ್ತವ್ಯದ ವೇಳೆ ಬುಲೆಟ್ ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ, ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ಎ ಎಸ್ ಐ ಸದಾಶಿವ ಮೃತ ದುರ್ದೈವಿ.
ಎ ಎಸ್ ಐ ಸದಾಶಿವ ರವರು ಕರ್ತವ್ಯದ ವೇಳೆ ಬುಲೆಟ್‍ನಲ್ಲಿ ತೆರಳುತ್ತಿರುವ ಸಂದರ್ಭ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.