ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರುಗದ್ದೆಯಲ್ಲಿ ನಡೆಯುತ್ತಿರುವ 29ನೇ ವರ್ಷದ ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳಕ್ಕೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ಚಾಲನೆ ನೀಡಿದರು.
ಮಾ.19 ರಂದು ಮುಂಜಾನೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ನಡೆದು,ಪ್ರಾರ್ಥನೆ ಸಲ್ಲಿಸಿ ಬಳಿಕ ದೇವಸ್ಥಾನದಿಂದ ದೇವರ ಮಾರುಗದ್ದೆ ವರೆಗೆ ಮೆರವಣಿಗೆ ಮೂಲಕ ಬಂದು ಕಂಬಳ ಗದ್ದೆಯಲ್ಲಿ ಗಣಪತಿ ಹೋಮ ನಡೆದ ಬಳಿಕ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ರವರ ಗೌರವಾಧ್ಯಕ್ಷತೆಯಲ್ಲಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ರವರ ಗೌರವ ಉಪಸ್ಥಿತಿಯಲ್ಲಿ ಕಂಬಳ ಕಾರ್ಯಕ್ರಮ ನಡೆಯುತ್ತಿದ್ದು, ಸಭಾ ಕಾರ್ಯಕ್ರಮದಲ್ಲಿ ಹಲವು ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.
ಪುತ್ತೂರಿನ ಕಂಬಳಕ್ಕೆ ಉಭಯ ಜಿಲ್ಲೆಗಳಲ್ಲಿ ನಡೆಯುವ ಇತರ ಕಂಬಳಗಳಿಗಿಂತ ಅತ್ಯಂತ ಹೆಚ್ಚಿನ ಸಂಖ್ಯೆಯ ಕೋಣಗಳು ಬರುವುದು ಇಲ್ಲಿನ ವಿಶೇಷತೆಯಾಗಿದೆ.