ವಿಟ್ಲ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಿಟಿ ಲಯನ್ಸ್ ಕ್ಲಬ್ ವಿಟ್ಲ ಇದರ ಜಂಟಿ ಆಶ್ರಯದಲ್ಲಿ, ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಕಾರದೊಂದಿಗೆ ನಡೆಯುತ್ತಿರುವ ಬೃಹತ್ ರಕ್ತದಾನ ಶಿಬಿರವನ್ನು ವಿಟ್ಲ ಪಟ್ಟಣ ಪಂಚಾಯತ್ ಸದಸ್ಯೆ ಸಂಗೀತ ಜಗದೀಶ್ ಪಾಣೆಮಜಲು ಅವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಡಾ.ಶ್ರೀಜಾ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಪ್ರಾಂತೀಯ ಸಲಹೆಗಾರ ಸುದರ್ಶನ್ ಪಡಿಯಾರ್, ವಿಟ್ಲ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಾಜೆ, ಪಟ್ಟಣ ಪಂಚಾಯತ್ ಸದಸ್ಯರಾದ ಹರೀಶ್ ಸಿಎಚ್, ಕಾಲೇಜು ಅಭಿವೃದ್ಧಿ ಸಮಿತಿಯ ಮೋಹನದಾಸ್ ಉಕ್ಕುಡ, ಐಟಿಐ ಕಾಲೇಜಿನ ಹರೀಶ್, ಕೆಎಂಸಿ ವೈದ್ಯಾಧಿಕಾರಿ ಡಾ.ಮಾನಸಿ, ಸಿಬ್ಬಂದಿ ದುರ್ಗಾ ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಡಾ. ಶ್ರೀಜಾ ಸ್ವಾಗತಿಸಿ, ಉಪನ್ಯಾಸಕರಾದ ನಾಗರಾಜ್ ಅವರು ವಂದಿಸಿದರು. ಉಪನ್ಯಾಸಕರಾದ ರಾಮಚಂದ್ರ ಕಾರ್ಯಕ್ರಮ ನಿರ್ವಹಿಸಿದರು. ಅನೇಕ ವಿದ್ಯಾರ್ಥಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದರು.






























